
ಬೆಳ್ತಂಗಡಿ : ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಕೆ.ಎಂ ನಾಗೇಶ್ ಕುಮಾರ್ ಗೌಡ ಅವರು ಮತ್ತೊಮ್ಮೆ ಆಯ್ಕೆ ಬಯಸಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಗೇಶ್ ಗೌಡ ಅವರು ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡು, ಪಕ್ಷದಲ್ಲಿ ಹಾಗೂ ಸಮಾಜದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸ್ಥಾನದಿಂದ ನೇರವಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಯಶಸ್ವಿಯಾಗಿ ಮುನ್ನಡೆಸಿದ್ದರು.
ಪ್ರಸ್ತುತ ಇವರು ನವ ಜ್ಞಾನಸುಧಾ ಪಿಯು ಕಾಲೇಜಿನ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.








