29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ವಿದುಷಿ ಕೃತಿ ಕೈಲಾರ್ ಅವರಿಗೆ ಡಿಸ್ಟಿಂಕ್ಷನ್

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ನಡೆಸುವ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಕೃತಿ ಕೈಲಾರ್ ಅವರು ಶೇ. 90% ಗಳಿಸಿ ವಿಶಿಷ್ಟ ಶ್ರೇಣಿಯನ್ನು ಪಡೆದು ತೇರ್ಗಡೆಯಾಗಿದ್ದಾರೆ. ಸುಮಾರು 17 ವರ್ಷಗಳ ಭರತನಾಟ್ಯ ಸಾಧನೆಯಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ.

ಕೃತಿ ಅವರು ತಮ್ಮ ಭರತನಾಟ್ಯ ಕಲಿಕೆಯನ್ನು ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಅವರಲ್ಲಿ ಆರಂಭಿಸಿ, ನಂತರ ಮೈಸೂರಿನ ವಿದುಷಿ ಸುಹಾಸಿನಿ ಕೌಲಗಿ ಅವರ ಮಾರ್ಗದರ್ಶನದಲ್ಲಿ ಉನ್ನತ ಹಂತದ ತರಬೇತಿಯನ್ನು ಮುಂದುವರಿಸಿದ್ದಾರೆ. ತಮ್ಮ ಗುರುಗಳ ಮಾರ್ಗದರ್ಶನದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಅವರು, ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಅಧ್ಯಯನ ಮತ್ತು ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಇವರು ದೂರದರ್ಶನದ ಗ್ರೇಡೆಡ್ ಕಲಾವಿದೆಯಾಗಿದ್ದು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವಿದ್ಯಾರ್ಥಿವೇತನವನ್ನೂ ಪಡೆದಿದ್ದಾರೆ.

ಕೃತಿ ಅವರು ಮೈಸೂರಿನ ಜೆ.ಎಸ್.ಎಸ್. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪೂರ್ಣಗೊಳಿಸಿದ್ದು, ಕಾನೂನು ಪದವಿಯಲ್ಲಿ ಐದನೇ ರ‍್ಯಾಂಕ್ ಗಳಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಭರತನಾಟ್ಯ ವಿಷಯದಲ್ಲಿ ಪ್ರದರ್ಶಕ ಕಲೆಗಳ ಸ್ನಾತಕೋತ್ತರ ಪದವಿ (ಎಂ.ಪಿ.ಎ.) ವ್ಯಾಸಂಗ ಮಾಡುತ್ತಿದ್ದಾರೆ. ಇವರು ಕೈಲಾರ್ ರಾಜಗೋಪಾಲ ಭಟ್ ಮತ್ತು ಶ್ರೀಮತಿ ಸತ್ಯೇಶ್ವರಿ ಕೆ. ಅವರ ಪುತ್ರಿ.

Related posts

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಅಪ್ಸರ ಫ್ಯಾಷನ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya
error: Content is protected !!