ಬೆಳ್ತಂಗಡಿ: ಶಿಶಿಲ-ಬೈರಾಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ.2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್
ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಬೆಳ್ತಂಗಡಿ ಗ್ರಾಮೀಣ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್ ತಿಳಿಸಿದ್ದಾರೆ.
ಈ ರಸ್ತೆ ಅಭಿವೃದ್ಧಿಯಾದರೆ ಎರಡೂ ಭಾಗಗಳ ಹೆಚ್ಚಿನ ಸಂಖ್ಯೆಯ ಜನರಿಗೆ ಪ್ರಯೋಜನವಾಗಲಿದೆ. ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.











