ಬೆಳ್ತಂಗಡಿ: ಬಹುಬೇಡಿಕೆಯ ಶಿಶಿಲ ಬೈರಾಪುರ ರಸ್ತೆ ನಿರ್ಮಾಣಕ್ಕಾಗಿ ಸಾರ್ವಜನಿಕರು ನಡೆಸುತ್ತಿರುವ ಹೋರಾಟಕ್ಕೆ ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣವಾಗಿ ಬೆಂಬಲ ನೀಡುತ್ತದೆ.
ಅರಣ್ಯ ಜಮೀನನ್ನು ಫಾರೆಸ್ಟ್ ಕ್ಲಿಯರೆನ್ಸ್ ಮೂಲಕ ಭೂ ಪರಿವರ್ತನೆ ಮಾಡಿ ಮತ್ತು ಖಾಸಗಿ ಜಮೀನಿನ ಮಾಲಕರ ಜೊತೆ ಸಂವಾದ ನಡೆಸಿ ಭೂ ಸ್ವಾಧೀನ ಪ್ರಕ್ರಿಯೆ ನಡೆಸಿ ಶೀಘ್ರದಲ್ಲಿ ರಸ್ತೆ ನಿರ್ಮಾಣ ಆಗಬೇಕು ಎಂದು ಆಗ್ರಹಿಸುತ್ತಾ. ನವೆಂಬರ್ 02 ರಂದು ನಡೆಯುವ ಹಕ್ಕೋತ್ತಾಯ ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











