29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ: ಎಸ್‌ಡಿಎಂ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡಗಳಿಗೆ ಗುಲಾಬಿ ಬಣ್ಣದ ಬೆಳಕಿನ ಅಲಂಕಾರ

ಉಜಿರೆ: ಸ್ತನ ಕ್ಯಾನ್ಸರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ಸುತ್ತೋಲೆಯ ಅನ್ವಯ, ಅಕ್ಟೋಬರ್ ತಿಂಗಳ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆಯ ಅಂಗವಾಗಿ ಅ. 29ರಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು ಹಾಗೂ ಧರ್ಮಸ್ಥಳದ ಶಾಂತಿವನದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಕಟ್ಟಡಗಳಿಗೆ ಗುಲಾಬಿ ಬಣ್ಣದ (Pink Lighting) ಬೆಳಕಿನ ಅಲಂಕಾರ ಮಾಡಲಾಯಿತು.

ಸ್ತನ ಕ್ಯಾನ್ಸರ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ರೋಗದ ಆರಂಭಿಕ ಲಕ್ಷಣಗಳನ್ನು ಗುರುತಿಸುವ ಮಹತ್ವವನ್ನು ತಿಳಿಸುವುದು ಹಾಗೂ ಸಕಾಲದಲ್ಲಿ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆಯನ್ನು ಪಡೆಯುವಂತೆ ಪ್ರೇರೇಪಿಸುವುದು ಈ ಜಾಗೃತಿ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಈ ವಿಶೇಷ ಬೆಳಕಿನ ಅಲಂಕಾರದ ಮೂಲಕ ಸ್ತನ ಕ್ಯಾನ್ಸರ್ ಜಾಗೃತಿಯ ಮಹತ್ವವನ್ನು ಸಾರುವುದರ ಜೊತೆಗೆ, ಆರೋಗ್ಯ ಜಾಗೃತಿ ಮೂಡಿಸುವ ವಿಶ್ವವಿದ್ಯಾಲಯದ ಅಭಿಯಾನದಲ್ಲಿ ಸಂಸ್ಥೆಯು ಸಕ್ರಿಯವಾಗಿ ಪಾಲ್ಗೊಂಡಿತು.

ಈ ಕಾರ್ಯಕ್ರಮವು ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವಲ್ಲಿ ಹಾಗೂ ಆರಂಭಿಕ ಪತ್ತೆಯ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಒಂದು ಅರ್ಥಪೂರ್ಣ ಪ್ರಯತ್ನವಾಗಿ ಮೂಡಿಬಂದಿತು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya
error: Content is protected !!