25.8 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಧರ್ಮಸ್ಥಳ: ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದ ಆಯ್ಕೆ, ವಿವಿಧ ಕೋರ್ಸ್‌ಗಳ ಭವಿಷ್ಯದ ಅವಕಾಶಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಉಜಿರೆಯ ಎಸ್‌ ಡಿ ಎಂ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ತಾಲೂಕು ಪಂಚಾಯತ್ ಬೆಳ್ತಂಗಡಿ ಹಾಗೂ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್‌ ಧರ್ಮಸ್ಥಳ ಇದರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗೇಶ್ ಎಂ. ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಮಾರ್ಗದರ್ಶನ ನೀಡಿದ ಅವರು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನು ಸ್ಪಷ್ಟವಾಗಿ ನಿರ್ಧರಿಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ರವಿಶಂಕರ್ ಕೆ. ಆರ್. ಅವರು ಕಲಾ ವಿಭಾಗದ ಮೂಲಕ ಸಮಾಜಕಾರ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಉನ್ನತ ಶಿಕ್ಷಣದ ಅವಕಾಶಗಳು, ಮುಂದಿನ ಶೈಕ್ಷಣಿಕ ಮಾರ್ಗಗಳು ಹಾಗೂ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಶ್ರೀ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿವಿಧ ಶೈಕ್ಷಣಿಕ ಕೋರ್ಸ್‌ಗಳ ಮುಂದಿನ ಅವಕಾಶಗಳು ಹಾಗೂ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುವ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಶೈಕ್ಷಣಿಕ ವಿಭಾಗಗಳು ಮತ್ತು ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನದ ಅವಧಿಗಳನ್ನು ನಡೆಸಲಾಯಿತು. ಕಲೆ ಮತ್ತು ಸಂವಹನ ಕ್ಷೇತ್ರದ ಕುರಿತು ಶ್ರೀ ಚಂದನ್ ಎಂ. ಎ., ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದ ಕುರಿತು ಮನೀಷಾ, ವಾಣಿಜ್ಯ ಮತ್ತು ವೃತ್ತಿಪರ ಕೋರ್ಸ್‌ಗಳ ಕುರಿತು ದೀಕ್ಷಾ ಎಂ. ಜಿ. ಹಾಗೂ ಐಟಿಐ ಮತ್ತು ಡಿಪ್ಲೊಮಾ ಕೋರ್ಸ್‌ಗಳ ಕುರಿತು ರಾಕೇಶ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹತ್ತನೇ ತರಗತಿಯ ನಂತರ ಆಯ್ಕೆ ಮಾಡಬಹುದಾದ ವಿವಿಧ ಕೋರ್ಸ್‌ಗಳು, ಉನ್ನತ ಶಿಕ್ಷಣದ ಅವಕಾಶಗಳು, ಭವಿಷ್ಯದ ಉದ್ಯೋಗಾವಕಾಶಗಳು ಹಾಗೂ ವೃತ್ತಿಜೀವನದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಗುರಿಗಳಿಗೆ ಅನುಗುಣವಾಗಿ ಸೂಕ್ತ ಶೈಕ್ಷಣಿಕ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಲು ನೆರವಾಗುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ಕಾರ್ಯಕ್ರಮವನ್ನು ನವೀನ್ ಟಿ. ಎಸ್. ನಿರೂಪಿಸಿದರು. ಪವನ್ ಕುಮಾರ್ ಕೆ. ಸ್ವಾಗತಿಸಿದರು. ಗಂಗಾಧರ್ ಅತಿಥಿಗಳನ್ನು ಪರಿಚಯಿಸಿದರು. ಕರಿನಿಂಗ ವಂದನಾರ್ಪಣೆ ಸಲ್ಲಿಸಿದರು.

Related posts

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!