29.9 C
ಪುತ್ತೂರು, ಬೆಳ್ತಂಗಡಿ
October 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ಹೈನುಗಾರರಿಗೆ ಪ್ರತಿ ಲೀಟರ್ ಗೆ 7 ರೂಪಾಯಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ನಿರ್ಧಾರ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಹೈನುಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ ಹೈನುಗಾರರ ಕಣ್ಣೀರು ಒರೆಸುವ ಮಹತ್ವದ ಪಾತ್ರ ವಹಿಸಿದೆ.

ಪಶು ಆಹಾರ ಬೆಲೆ ಹಾಗೂ ಪಶು ನಿರ್ವಹಣಾ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಡೀ ಹೈನುಗಾರಿಕಾ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಹೈನುಗಾರರ ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಜೊತೆಗೆ ಗ್ರಾಮೀಣ ಆರ್ಥಿಕತೆಯನ್ನು ಗಟ್ಟಿಗೊಳಿಸಲು ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿ 7 ರೂಪಾಯಿ ಘೋಷಣೆ ಮಾಡಲಾಗಿದೆ. ಇದು ರೈತಪರ ಸರ್ಕಾರದ ಕಾಳಜಿಗೆ ಸಾಕ್ಷಿಯಾಗಿದೆ. ರಾಜ್ಯದ ಹೈನುಗಾರರ ಹಿತ ಕಾಪಾಡಲು ಐತಿಹಾಸಿಕ ತೀರ್ಮಾನ ಕೈಗೊಂಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈನುಗಾರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!