ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ಮುಖಂಡರಾದ ಶೇಖರ ಕುಕ್ಕೇಡಿ ಅವರು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಶೇಖರ ಕುಕ್ಕೇಡಿ ಅವರು ಅಳದಂಗಡಿ ಜಿ.ಪಂ ಕ್ಷೇತ್ರದ ಮಾಜಿ ಸದಸ್ಯರಾಗಿ, ಕಾಂಗ್ರೆಸ್ ಜಿಲ್ಲಾ ಎಸ್.ಸಿ ಘಟಕದ ಮಾಜಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬ್ಲಾಕ್ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.











