ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ಹಾಗೂ ನಿಷ್ಠಾವಂತ ಮುಖಂಡರಾದ ಆಶ್ರಫ್ ನೆರಿಯ ಅವರು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ನೆರಿಯ ಗ್ರಾಮ ಪಂಚಾಯತದ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಆಶ್ರಫ್ ನೆರಿಯ ಪ್ರಸ್ತುತ ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ, ನೆರಿಯ ಗ್ರಾಹಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಬಯಲು ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸುವ ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು.











