ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಲಾದ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ 7ನೇ ತರಗತಿಯ ವಿದ್ಯಾರ್ಥಿನಿ ಆಯುಷ್ಯ ತುಲ್ ಸಫಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.











