October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಬೆಳ್ತಂಗಡಿ ಆದಿವಾಸಿ ಬುಡಕಟ್ಟು ಸಮುದಾಯದಿಂದ ಅಭಿನಂದನೆ

ಬೆಳ್ತಂಗಡಿ : ರಾಜ್ಯದ ಆದಿವಾಸಿ ಮತ್ತು ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದರ ಹಿಂದಿನ ಪ್ರೇರಕ ಶಕ್ತಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ಬೆಳ್ತಂಗಡಿ ತಾಲೂಕಿನ ಆದಿವಾಸಿಗಳ ಪರವಾಗಿ ಅಭಿನಂದಿಸಲಾಯಿತು.

ರಾಜ್ಯದ ಅರಣ್ಯ ಮತ್ತು ಅರಣ್ಯಾಧಾರಿತ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳ ವಿಶೇಷ ಅಭಿವೃದ್ಧಿಗಾಗಿ ವಿಶೇಷ ಗಮನ ನೀಡುವ ಉದ್ದೇಶದಿಂದ ಸ್ಥಾಪಿತವಾದ ಈ ನಿಗಮವು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗಮದ ಮೂಲಕ ಆದಿವಾಸಿ ಬುಡಕಟ್ಟು ಸಮುದಾಯಗಳಿಗೆ ಆರ್ಥಿಕ ನೆರವು , ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ದಿ , ಮಾರುಕಟ್ಟೆ ಸಂಪರ್ಕ ಮತ್ತು ಜೀವನೋಪಾಯದ ಅವಕಾಶಗಳು , ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಬುಡಕಟ್ಟು ಜನರ ಸಾಂಪ್ರದಾಯಿಕ ಜೀವನೋಪಾಯಕ್ಕಾಗಿ ಬೆಂಬಲ ನೀಡುವ ಕ್ಷೇತ್ರಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಈ ನಿಗಮ ಸ್ಥಾಪಿಸಲಾಗಿದೆ. ಜೊತೆಗೆ ಈ ನಿಗಮದ ಸ್ಥಾಪನೆಗೆ ಒಟ್ಟು 33.36 ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿರುವುದು ರಾಜ್ಯ ಸರ್ಕಾರಕ್ಕೆ ಆದಿವಾಸಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಬಗೆಗಿನ ಕಾಳಜಿಗೆ ಸಾಕ್ಷಿಯಾಗಿದೆ. ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ವಿಶೇಷ ಕಾಳಜಿ ವಹಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರನ್ನು ತಾಲೂಕು ಮಲೆಕುಡಿಯ ಸಂಘದ ಕಾರ್ಯದರ್ಶಿ ಜಯಾನಂದ ಪಿಲಿಕಲ , ಮುಖಂಡರಾದ ಲಕ್ಷ್ಮಣ ಆಲಂಗಾಯಿ ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಹಿಂದೆ ಸಪ್ಟೆಂಬರ್ 2 ರಂದು ಬಿ.ಕೆ ಹರಿಪ್ರಸಾದ್ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಭೇಟಿಯಾಗಿ ಪ್ರತ್ಯೇಕ ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದ ಬಿ.ಕೆ ಹರಿಪ್ರಸಾದ್ ಅವರನ್ನು ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು.

Related posts

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya
error: Content is protected !!