October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಂತರರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಶಿಬಿರ

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢ ಶಾಲೆ ಕೊಯ್ಯೂರು ರವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟೀಯ ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಪೋಕ್ಸೋ ಕಾಯಿದೆ ಕುರಿತು ತಿಳಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯಾಧೀಶರಾದ ರಾಮಲಿಂಗಪ್ಪ ರವರು ​ಪೋಕ್ಸೋ ಕಾಯ್ದೆ, ಮಕ್ಕಳ ಹಿತರಕ್ಷಣೆ ಬಗ್ಗೆ
ತಿಳಿಸಿದರು.


ವಕೀಲರ ಸಂಘ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೋ ರವರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ಸುರಕ್ಷತೆ ಮತ್ತು ಜಾಗೃತಿ:ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ (Good Touch & Bad Touch) ಬಗ್ಗೆ ವಿಧ್ಯಾರ್ಥಿಗಳಿಗೆ ತಿಳಿಸಿದರು.


​ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಅವರು ಕಾರ್ಯಕ್ರಮದಲ್ಲಿ ವಕೀಲರ ಸಂಘ (ರಿ) ಬೆಳ್ತಂಗಡಿ ರವರು ವಿದ್ಯಾರ್ಥಿಗಳಿಗೆ ಉಚಿತ ಕಾನೂನು ನೆರವು (Free Legal Aid) ಕುರಿತು ವಿದ್ಯಾರ್ಥಿಗಳಿಗೆ ಕಾನೂನು ಸೇವೆಗಳ ಸಮಿತಿಯ ಉದ್ದೇಶ ಬಗ್ಗೆ ತಿಳಿಸಿದರು.
​
​
ಸಂಪನ್ಮೂಲ ವ್ಯಕ್ತಿ ಶ್ವೇತಾ ವಕೀಲರು, ಬೆಳ್ತಂಗಡಿ ರವರು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ (International Day of the Girl Child) ಯ ಮಹತ್ವವನ್ನು ತಿಳಿಸಿಕೊಟ್ಟರು. ಶಾಲೆಯ ಮುಖೋಪಾದ್ಯಯರಾದ ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದೆ ಎಂದು ತಿಳಿಸಿದರು. ವಿಶೇಷವಾಗಿ ಪೋಕ್ಸೋ ಕಾಯ್ದೆ, ಉಚಿತ ಕಾನೂನು ನೆರವು ಮತ್ತು ಹೆಣ್ಣು ಮಕ್ಕಳ ರಕ್ಷಣೆಯಂತಹ ಮಹತ್ವದ ವಿಷಯಗಳ ಕುರಿತು ಶಾಲಾ ಹಂತದಲ್ಲೇ ಮಕ್ಕಳಿಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.


​ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪಯುಕ್ತ ಮಾಹಿತಿ ನೀಡಿದ ವಕ್ತಾರರಿಗೆ, ಸರ್ಕಾರದ ಪ್ರೌಢಶಾಲೆ ಕೊಯ್ಯೂರು ಶಾಲೆಯ ಮುಖ್ಯೋಪಧ್ಯಾಯರಿಗೆ, ಶಿಕ್ಷಕ ವೃಂದಕ್ಕೆ ಹಾಗೂ ಸಕ್ರಿಯವಾಗಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಂದಿಸಿದರು.


​

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ತುಳು ಭಾಷೆಗೆ ಐತಿಹಾಸಿಕ ಗೌರವ: ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ-ಕೆ. ಹರೀಶ್ ಕುಮಾರ್

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya
error: Content is protected !!