ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ವತಿಯಿಂದ ನಡೆಸಲ್ಪಡುವ ಕಕ್ಯಪದವಿನ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅಮೋಘ್ ಎಂ.ಡಿ. ಮತ್ತು ಕುಶ್ವಿತ್ ಎಂ. ಅವರು ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇವರ ಆಶ್ರಯದಲ್ಲಿ ನಡೆದ ‘ಅನ್ವಯ 2K26’ ಅಂತರ್ ಕಾಲೇಜು ಉತ್ಸವದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ಕ್ರೋನೋ ಕ್ವೆಸ್ಟ್ – ಟ್ರೆಷರ್ ಹಂಟ್’ ಸ್ಪರ್ಧೆಯಲ್ಲಿ ಭಾಗವಹಿಸಿದ ಈ ವಿದ್ಯಾರ್ಥಿಗಳು ತಮ್ಮ ಚುರುಕುತನ, ಸಮಯಪ್ರಜ್ಞೆ, ತಾರ್ಕಿಕ ಚಿಂತನೆ ಹಾಗೂ ತಂಡದ ಸಹಕಾರದ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣಪತ್ರ ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಿ ಗೌರವಿಸಲಾಯಿತು.











