October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲಿನಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ತಿಂಗಳಿಗೆ ಎರಡು ಪಂಚಾಯತ್‌ಗಳಲ್ಲಿ ಪ್ರಜಾ ಸೇವೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚನೆ ನೀಡಿದೆ. ಈ ಸೂಚನೆಯ ಅನ್ವಯ ಇಂದು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಅ.31 ರಂದು ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ನಡೆದ ಗ್ರಾಮ ಮಟ್ಟದ ಪ್ರಜಾ ಸೇವೆಯಲ್ಲಿ ಮಾತನಾಡಿದರು.

ಪ್ರಜಾ ಸೇವೆಯ ಉದ್ದೇಶ ಎಲ್ಲಾ ಇಲಾಖಾ ಅಧಿಕಾರಿಗಳು ಪಂಚಾಯತ್ ವ್ಯಾಪ್ತಿಗೆ ಬಂದು, ಸ್ಥಳೀಯ ಸಮಸ್ಯೆಗಳನ್ನು ಅಧಿಕೃತವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡು ಕಾಲಕಾಲಕ್ಕೆ ಪರಿಹಾರ ಒದಗಿಸುವುದು ಸರ್ಕಾರದ ಆಶಯವಾಗಿದೆ.
ಪ್ರಜಾ ಸೇವೆ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನ ಜನತೆಗೆ ಹೊಸತೇನಲ್ಲ. ಈ ಪರಿಕಲ್ಪನೆಯನ್ನು ಈಗಾಗಲೇ ತಾಲೂಕಿನ ಎಲ್ಲ 48 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಒಂದು ಸುತ್ತಿನ ಜನಸ್ಪಂದನ ಸಭೆ ನಡೆಸಲಾಗಿದೆ. ರಾಜ್ಯದಲ್ಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಈ ರೀತಿಯ ಕಾರ್ಯಕ್ರಮ ಮಾಡಲಾಗಿದೆ ಎಂದು ಅವರು ಹೇಳಿದರು.

ಸರ್ವರ್ ಸಮಸ್ಯೆ:

ಪಡಿತರ ಅಕ್ಕಿ ವಿತರಣೆಯಲ್ಲಿ ಸರ್ವರ್ ಸಮಸ್ಯೆ ಇದೆ ಎಂದು ಗ್ರಾಮಸ್ಥರು ದೂರಿದಾಗ, ಕಳೆದ ಎರಡು ದಿನಗಳಿಂದ ಸರ್ವರ್ ಸಮಸ್ಯೆ ಬಗೆಹರಿದಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದರು.
ಈ ಕುರಿತು ಮಾತನಾಡಿದ ತಹಶೀಲ್ದಾರ್, ಸರ್ವರ್ ಸಮಸ್ಯೆ ಶಿರ್ಲಾಲುನಲ್ಲಿ ಮಾತ್ರವಲ್ಲ, ರಾಜ್ಯಾದ್ಯಂತ ಇದೆ ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎನ್. ನರಗುಂದ, ತಾ.ಪಂ. ಇಓ ಭವಾನಿಶಂಕರ್, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಾರ್ವಜನಿಕರು ಸಮಸ್ಯೆಗಳ, ಸವಲತ್ತುಗಳ ಅಹವಾಲು ಸಲ್ಲಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಸ್ವಾಗತಿಸಿ, ವಿಜಯ್ ಕುಮಾರ್ ಧನ್ಯವಾದವಿತ್ತರು.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!