October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಅಭಿನಂದನ್ ಹರೀಶ್ ಕುಮಾರ್ ಬೆಂಬಲ: ನ.2ರ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಸಹಕಾರ

ಅರಸಿನಮಕ್ಕಿ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ.2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಹಾಗೂ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ತಿಳಿಸಿದ್ದಾರೆ.

ಶಿಶಿಲ–ಬೈರಾಪುರ ರಸ್ತೆ ನಿರ್ಮಾಣದಿಂದ ಎರಡೂ ಭಾಗಗಳ 50 ಸಾವಿರಕ್ಕೂ ಅಧಿಕ ಜನರಿಗೆ ನೇರ ಪ್ರಯೋಜನವಾಗಲಿದೆ. ಗ್ರಾಮೀಣ ಜನರ ಸಂಚಾರ, ವಿದ್ಯಾರ್ಥಿಗಳ ಪ್ರಯಾಣ, ರೈತರ ಕೃಷಿ ಉತ್ಪನ್ನಗಳ ಸಾಗಾಟ ಹಾಗೂ ಸ್ಥಳೀಯ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ, ಮಲೆನಾಡು ಮತ್ತು ಕರಾವಳಿ ನಡುವಿನ ಸಂಪರ್ಕ ಸುಗಮಗೊಂಡು ಈ ಪ್ರದೇಶದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಹೊಸ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ರಸ್ತೆ ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಮತ್ತು ಬೈರಾಪುರದ ಶ್ರೀ ನಾಣ್ಯ ಭೈರವೇಶ್ವರ ದೇವಸ್ಥಾನಗಳನ್ನು ಸಂಪರ್ಕಿಸುವ ಮಹತ್ವದ ಕೊಂಡಿಯಾಗಲಿದೆ. ಉಭಯ ಕ್ಷೇತ್ರಗಳ ನಡುವಿನ ಐತಿಹಾಸಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. ಎರಡೂ ಭಾಗಗಳ ಭಕ್ತರಿಗೆ ದೇವಸ್ಥಾನಗಳ ದರ್ಶನ ಹಾಗೂ ಜಾತ್ರೋತ್ಸವಗಳಲ್ಲಿ ಪಾಲ್ಗೊಳ್ಳಲು ಸುಲಭವಾಗುವುದರ ಜೊತೆಗೆ ಧಾರ್ಮಿಕ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಶಿರಾಡಿ ಮತ್ತು ಚಾರ್ಮಾಡಿ ಘಾಟಿ ರಸ್ತೆಗಳಿಗೆ ಪರ್ಯಾಯ ಸಂಪರ್ಕ ಮಾರ್ಗವಾಗಿ ಈ ರಸ್ತೆ ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದರಿಂದ ಪ್ರಯಾಣದ ದೂರ ಮತ್ತು ಸಮಯ ಕಡಿಮೆಯಾಗುವುದರೊಂದಿಗೆ ಇಂಧನ ಉಳಿತಾಯಕ್ಕೂ ಸಹಕಾರಿಯಾಗಲಿದೆ. ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿರುವ ರಸ್ತೆ ಅಭಿವೃದ್ಧಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದು ಯಾವುದೇ ಒಂದು ಪಕ್ಷಕ್ಕೆ ಸೀಮಿತವಾದ ಬೇಡಿಕೆಯಲ್ಲ. ಸಾವಿರಾರು ಜನರ ಬದುಕು, ಶಿಕ್ಷಣ, ಕೃಷಿ, ವ್ಯಾಪಾರ ಹಾಗೂ ಧಾರ್ಮಿಕ ಸಂಪರ್ಕಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿಯ ವಿಚಾರವಾಗಿದೆ. ಆದ್ದರಿಂದ ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಹೋರಾಟಕ್ಕೆ ಕೈಜೋಡಿಸಬೇಕು. ನ.2ರಂದು ಅರಸಿನಮಕ್ಕಿಯಲ್ಲಿ ನಡೆಯುವ ಹಕ್ಕೊತ್ತಾಯ ಸಮಾವೇಶದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅಭಿನಂದನ್ ಹರೀಶ್ ಕುಮಾರ್ ಮನವಿ ಮಾಡಿದ್ದಾರೆ.

Related posts

ಕರ್ನಾಟಕ ಗ್ರಾಮೀಣ ಬ್ಯಾಂಕ್ ಅರಸಿನಮಕ್ಕಿ ಶಾಖೆಯ ಸಿಬ್ಬಂದಿ ಕೆ. ಸಂಜೀವ ರವರಿಗೆ ಸೇವಾ ನಿವೃತ್ತಿ

Suddi Udaya

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya
error: Content is protected !!