October 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂಐಟಿ ಕಾಲೇಜಿನಲ್ಲಿ ‘ಸ್ಟಾರ್‌ಡಮ್ 2026’ ವಾರ್ಷಿಕೋತ್ಸವ ಸಂಭ್ರಮ ಉದ್ಘಾಟನೆ

ಉಜಿರೆ: ಕಾರ್ಯಕ್ರಮಗಳನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ. ಅದರ ಹಿಂದೆ ಸಾಕಷ್ಟು ಪರಿಶ್ರಮ ಮತ್ತು ಯೋಜನೆ ಇರುತ್ತದೆ. ಆದರೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂತೋಷಪಟ್ಟು ಪಡೆಯುವ ಅನುಭವ ಹಾಗೂ ಜ್ಞಾನ ಅಮೂಲ್ಯವಾದುದು ಎಂದು ಎಸ್‌ಡಿಎಂಇ ಸೊಸೈಟಿ (ರಿ.) ಉಜಿರೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.

ಅವರು ಅ. 30ರಂದು ಉಜಿರೆಯ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವತಿಯಿಂದ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭದ ಅಂಗವಾಗಿ ಆಯೋಜಿಸಲಾದ ಎರಡು ದಿನಗಳ ‘ಸ್ಟಾರ್‌ಡಮ್ 2026 – ದಿ ಗ್ರ್ಯಾಂಡ್ ಸ್ಟೇಜ್ ಆಫ್ ಎಕ್ಸ್‌ಪ್ರೆಶನ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ತಂಡ ಕಳೆದ ಹಲವು ತಿಂಗಳುಗಳಿಂದ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ. ಉಪನ್ಯಾಸಕರಿಗೆ ಬೋಧನೆಯ ಜೊತೆಗೆ ವಿದ್ಯಾರ್ಥಿಗಳನ್ನು ತಿದ್ದಿ, ಅವರ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಜವಾಬ್ದಾರಿಯೂ ಇದೆ. ಇಂದು ಚಾಟ್‌ಜಿಪಿಟಿ, ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳು ಎಷ್ಟೇ ಮುಂದುವರಿದಿದ್ದರೂ ತರಗತಿಯಲ್ಲಿ ಆಸಕ್ತಿಯಿಂದ ಕಲಿಯದೆ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಒಂದು ಕಾಲಿನಲ್ಲಿ ನಿಂತು ಪಾಠಗಳನ್ನು ಹೇಳುವಂತಹ ಶಿಸ್ತು ಇತ್ತು. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಆಲೋಚಿಸಿ ಕಲಿಯುವ ಅಗತ್ಯವಿದೆ ಎಂದರು.

ಸುಮಾರು 19 ವರ್ಷಗಳ ಹಿಂದೆ ಆರಂಭಗೊಂಡ ಈ ಕ್ಯಾಂಪಸ್ ಉತ್ತಮವಾಗಿ ಬೆಳೆದುಬಂದಿದೆ. ಹಿಂದಿನ ಪ್ರಾಂಶುಪಾಲರಾದ ಅಶೋಕ್ ಅವರು ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದು, ಇದೀಗ ಡಾ. ಸಂದೀಪ್ ಅವರ ನೇತೃತ್ವದಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ಮತ್ತು ಸಾಧನೆಗಳು ಮೂಡಿಬರಲಿ ಎಂದು ಹಾರೈಸಿದರು.

ಬೆಂಗಳೂರಿನ ಟಿಸಿಎಸ್ ರಿಸರ್ಚ್ ಆ್ಯಂಡ್ ಇನ್ನೋವೇಷನ್ ವಿಭಾಗದ ಸೈಬರ್ ಸೆಕ್ಯುರಿಟಿ ಮತ್ತು ಪ್ರೈವಸಿ ರಿಸರ್ಚ್ ಮುಖ್ಯಸ್ಥ ಡಾ. ರಾಜನ್ ಎಂ.ಎ. ಮುಖ್ಯ ಅತಿಥಿಯಾಗಿ ಮಾತನಾಡಿದರು. ಎಸ್‌ಡಿಎಂಇ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉಪಸ್ಥಿತರಿದ್ದು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸಂದೀಪ್ ಆರ್. ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ಸಂಘಟನಾ ಕಾರ್ಯದರ್ಶಿಗಳಾದ ಗಣಿತ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಕೆ. ಹಾಗೂ ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶೋಭಾ ಪಿ. ಉಪಸ್ಥಿತರಿದ್ದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರವೀಶ್ ಪಡುಮಲೆ ಸ್ವಾಗತಿಸಿದರು.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya
error: Content is protected !!