ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಪದವಿಪೂರ್ವ ಕಾಲೇಜು ವಿಭಾಗದ ಕ್ರೀಡಾಪಟುಗಳು ಸರಕಾರಿ ಪದವಿಪೂರ್ವ ಕಾಲೇಜು ಸಜಿಪಮೂಡ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 30 ರಂದು ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ–ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದರು.
ಈ ಕ್ರೀಡಾ ಕೂಟದಲ್ಲಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಕ್ರೀಡಾ ಸ್ಫೂರ್ತಿಯಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಾಲಕಿಯರ ವಿಭಾಗದಲ್ಲಿ (ಜಾವೆಲಿನ್ ) ಈಟಿ ಎಸೆತದ ಸ್ಪರ್ಧೆಯಲ್ಲಿ ದ್ವಿತೀಯಾ ಪಿ.ಯು.ಸಿ ಯ ಅನುಶ್ರೀ.ಟಿ ದ್ವಿತೀಯಾ ಸ್ಥಾನ ಹಾಗೂ 800 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ಚೈತ್ರಾ ಯು.ಎಸ್. ದ್ವಿತೀಯಾ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ . 1500 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯಾ ಪಿ.ಯು.ಸಿ ಯ ನಿಧಿ.ಎ ತೃತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಬಾಲಕರ ವಿಭಾಗದ ಹರ್ಡಲ್ಸ್ ನಲ್ಲಿ ಪ್ರೀತಂ ದ್ವಿತೀಯಾ ಪಿ.ಯು.ಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಂಸ್ಥೆಯ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರಥ್ವಿರಾಜ್ ಇವರು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿರುತ್ತಾರೆ.











