ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಗೃಹ ಇಲಾಖೆಯ ಸಕ್ಷಮ ಅಪೀಲು ಪ್ರಾಧಿಕಾರ ತಿರಸ್ಕರಿಸಿದೆ ಎಂದು ವರದಿಯಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ವಿವಿಧ ಕ್ರಿಮಿನಲ್ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಗೆ ಸಂಬಂಧಿಸಿದ ಕಾರಣಗಳನ್ನು ಉಲ್ಲೇಖಿಸಿ ಪುತ್ತೂರು ಸಹಾಯಕ ಆಯುಕ್ತರು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಇದೀಗ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಗೃಹ ಇಲಾಖೆಯ ಸಕ್ಷಮ ಅಪೀಲು ಪ್ರಾಧಿಕಾರ ತಿರಸ್ಕರಿಸಿದೆ ಎಂದು ಹೇಳಲಾಗುತ್ತಿದ್ದು, ಇದರಿಂದಾಗಿ ಅವರ ಗಡಿಪಾರು ಆದೇಶ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.











