ಬೆಳ್ತಂಗಡಿ: ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನ. 2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಅರಸಿನಮಕ್ಕಿ ಕಪಿಲ ಕೇಸರಿ ಯುವಕ ಮಂಡಲದಿಂದ ಸಂಪೂರ್ಣ ಬೆಂಬಲ ಇದೆ ಎಂದು ಕಪಿಲ ಕೇಸರಿ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಬೊಳ್ಳೋಡಿ ತಿಳಿಸಿದ್ದಾರೆ.
ಈ ಭಾಗದ ಜನರ ಸಂಚಾರ, ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಆರ್ಥಿಕ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಯೋಜನೆಯಾಗಿರುವ ಶಿಶಿಲ–ಬೈರಾಪುರ ರಸ್ತೆ ನಿರ್ಮಾಣಕ್ಕೆ ಸರ್ಕಾರ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.











