October 31, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಶಿಶಿಲ–ಭೈರಾಪುರ ರಸ್ತೆ ನಿರ್ಮಾಣಕ್ಕೆ ಬೇಡಿಕೆಗೆ ಸಂಪೂರ್ಣ ಬೆಂಬಲ: ಕ್ಯಾಪ್ಟನ್ ಬ್ರಿಜೇಶ್ ಚೌಟ: ನ.2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಸಾರ್ವಜನಿಕ ಹಕ್ಕೊತ್ತಾಯ ಸಭೆಗೆ ಬೆಂಬಲ ಘೋಷಣೆ

ಮಂಗಳೂರು : ಶಿಶಿಲ–ಭೈರಾಪುರ ರಸ್ತೆ ನಿರ್ಮಾಣದ ಬೇಡಿಕೆ ಹಲವು ವರ್ಷಗಳಿಂದ ಸ್ಥಳೀಯ ಜನರ ಪ್ರಮುಖ ಸಾರ್ವಜನಿಕ ಬೇಡಿಕೆಯಾಗಿದೆ. ಈ ಭಾಗದ ಜನರ ಸಂಚಾರ, ಸಂಪರ್ಕ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ರಸ್ತೆ ನಿರ್ಮಾಣ ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 2ರಂದು ಅರಸಿನಮಕ್ಕಿಯಲ್ಲಿ ನಡೆಯಲಿರುವ ಸಾರ್ವಜನಿಕ ಹಕ್ಕೊತ್ತಾಯ ಸಭೆಗೆ ಹಾಗೂ ಶಿಶಿಲ–ಭೈರಾಪುರ ರಸ್ತೆ ನಿರ್ಮಾಣದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಸ್ತೆ ನಿರ್ಮಾಣದ ಬೇಡಿಕೆ ಸ್ಥಳೀಯ ಜನರ ನ್ಯಾಯಯುತ ಆಶಯವಾಗಿದ್ದು, ಜನರ ಧ್ವನಿಗೆ ಸ್ಪಂದಿಸುವುದು ಮತ್ತು ಈ ಬೇಡಿಕೆಯನ್ನು ಸಂಬಂಧಪಟ್ಟ ಆಡಳಿತಾತ್ಮಕ ಹಾಗೂ ಸರ್ಕಾರಿ ಮಟ್ಟದಲ್ಲಿ ಮುಂದಕ್ಕೆ ಕೊಂಡೊಯ್ಯುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿಶಿಲ–ಭೈರಾಪುರ ರಸ್ತೆ ನಿರ್ಮಾಣದ ಮಹತ್ವವನ್ನು ಮನಗಂಡು ಸಂಸದರು ಈಗಾಗಲೇ ಈ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೂ ತಂದಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ಈ ರಸ್ತೆ ನಿರ್ಮಾಣದ ಅಗತ್ಯತೆ ಹಾಗೂ ಸ್ಥಳೀಯ ಜನರ ಬೇಡಿಕೆಯ ಕುರಿತು ಗಮನ ಸೆಳೆದಿದ್ದರು. ಈ ಮೂಲಕ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಮಟ್ಟದಲ್ಲಿಯೂ ಪ್ರಯತ್ನ ಆರಂಭಿಸಿದ್ದರು.ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸೂಕ್ತ ಸ್ಪಂದನೆ ದೊರೆಯಬೇಕು. ರಸ್ತೆ ಸಂಪರ್ಕ ಸುಧಾರಿಸುವುದರಿಂದ ಸ್ಥಳೀಯ ಜನರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವುದರ ಜತೆಗೆ ಗ್ರಾಮೀಣ ಪ್ರದೇಶದ ಅಭಿವೃದ್ಧಿ, ಜನಜೀವನ ಮತ್ತು ಆರ್ಥಿಕ ಚಟುವಟಿಕೆಗಳಿಗೂ ನೆರವಾಗಲಿದೆ. ಆದ್ದರಿಂದ ನವೆಂಬರ್ 2ರಂದು ಅರಸಿನಮಕ್ಕಿಯಲ್ಲಿ ನಡೆಯುವ ಸಾರ್ವಜನಿಕ ಹಕ್ಕೊತ್ತಾಯ ಸಭೆ ಈ ಬೇಡಿಕೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸರ್ಕಾರದ ಗಮನಕ್ಕೆ ತರುವ ಪ್ರಯತ್ನವಾಗಿದೆ.ಈ ಸಾರ್ವಜನಿಕ ಸಭೆ ಹಾಗೂ ರಸ್ತೆ ನಿರ್ಮಾಣದ ಬೇಡಿಕೆಗೆ ತಮ್ಮ ಬೆಂಬಲವಿದ್ದು, ಜನರ ಆಶಯ ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಹಂತಗಳಲ್ಲಿ ಪ್ರಯತ್ನ ಮುಂದುವರಿಸಲಾಗುವುದು.

ಶಿಶಿಲ-ಭೈರಾಪುರ ಸಂಪರ್ಕಿಸುವ ರೀತಿಯಲ್ಲಿ ರೈಲ್ವೆ ಲೈನ್ ನಿರ್ಮಾಣ ಮಾಡುವ ಸಾಧ್ಯತೆಗಳ ಕುರಿತು ಸರ್ವೇ ಮಾಡಿ ಪರಿಶೀಲಿಸುವ ಬಗ್ಗೆಯೂ ಕೇಂದ್ರ ರೈಲ್ವೆ ಇಲಾಖೆಗೆ ಮನವಿ ಮಾಡಲಾಗುವುದು ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.ಸಂಸದರ ಪತ್ರದಲ್ಲಿದ್ದ ಅಂಶಗಳು : ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮೇ 2026ರಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದರು.ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ (PMGSY) ಅಡಿಯಲ್ಲಿ ಮಣ್ಣಿನ ರಸ್ತೆಯನ್ನು ಸರ್ವಋತು ರಸ್ತೆಯಾಗಿ ಮೇಲ್ದರ್ಜೆಗೇರಿಸುವಂತೆ ಮನವಿ ಮಾಡಿದ್ದರು. 800 ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗ ಇದಾಗಿದೆ. ಪ್ರತಿದಿನ ಸರಾಸರಿ 10 ಸಾವಿರ ಭಕ್ತರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂಬ ಅಂಶವನ್ನೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು.

ತೊಂದರೆ ನಿವಾರಣೆ ಆಗಬೇಕು : ಶಿಶಿಲ ಮತ್ತು ಬೈರೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೂ ನೇರ ಸಂಪರ್ಕದ ಕೊರತೆಯಿಂದ ತೊಂದರೆಯಾಗುತ್ತಿದೆ. ಈ ಎರಡು ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಗಾಗಿ ಈ ಹಿಂದೆ ಸರ್ವೆ ನಡೆಸಿ ಮಾರ್ಗ ಗುರುತಿಸುವ ಅಧ್ಯಯನಕ್ಕೆ ಅನುಮೋದನೆ ದೊರೆತಿದ್ದರೂ, ಅನುದಾನದ ಕೊರತೆಯಿಂದ ಯೋಜನೆ ಸ್ಥಗಿತಗೊಂಡಿತ್ತು.

Related posts

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಅ11: ವಿದ್ವತ್ ಪಿಯು ಕಾಲೇಜಿನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪರೀಕ್ಷೆ

Suddi Udaya
error: Content is protected !!