November 2, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 71 ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸ್ಟಾರ್ ಲೈನ್ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಸೈಯದ್‌ ಹಬೀಬ್ ಸಾಹೇಬ್ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತ,ಕನ್ನಡ ಭಾಷೆಯನ್ನು ಪ್ರೀತಿಸಿ ಅದನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡೋಣ ಎಂದು ಹೇಳಿದರು .
ವೇದಿಕೆಯಲ್ಲಿ ಕೋಶಾಧಿಕಾರಿ ಸಯ್ಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯನಿ ಜಾಕಿನ್ ಬಿನ್ ರವರು ಮಾತನಾಡಿ, ಕನ್ನಡ ನಾಡನ್ನು ಉಳಿಸಿ ಬೆಳೆಸುವ ಹೆಮ್ಮೆಯ ಕನ್ನಡಿಗರಾಗಿ ಬದುಕೋಣ ಎನ್ನುತ್ತಾ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!