November 1, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ: ಮಾತೃ ಭಾಷೆ ಉಳಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯಲು ಸಾಧ್ಯ: ಹರೀಶ್ ಪೂಂಜ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.1ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ಜರುಗಿತು.

ಕಾಯ೯ಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಿ, ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವು ಕನ್ನಡದಲ್ಲೇ ಮಾತನಾಡಬೇಕು, ಕನ್ನಡ ಪತ್ರಿಕೆ, ಸಾಹಿತ್ಯವನ್ನು ಓದಬೇಕು, ಮಾತೃ ಭಾಷೆ ಉಳಿದರೆ ಮಾತ್ರ ನಮ್ಮ ಕನ್ನಡ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಹೇಳಿದರು.

ಧ್ವಜಾರೋಹಣವನ್ನು ತಹಶೀಲ್ದಾರ್ ಎಸ್.ಎನ್ ನರಗುಂದ ನೇರವೇರಿಸಿ, ಕನ್ನಡ ಭಾಷೆ ಸಂಸ್ಕೃತಿ ಉಳಿಯುವ ನಿಟ್ಟಿನಲ್ಲಿ ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಕರೆ ನೀಡಿದರು.ಪ್ರಧಾನ ಭಾಷಣ ಮಾಡಿದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಬಿ.ಪಿ ಸಂಪತ್ ಕುಮಾರ್ ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ ನಿರೀಕ್ಷಕ ರವಿ ಬಿ.ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ, ಮುಖ್ಯಾಧಿಕಾರಿ ರಾಜೇಶ್ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರಬಂಧ ಹಾಗೂ ಚಿತ್ರ ಕಲಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.‌ತಾ.ಪಂ ಕಾಯ೯ನಿವ೯ಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು. ಬೆಳ್ತಂಗಡಿ ಕನಾ೯ಟಕ ಪಬ್ಲಿಕ್ ಸ್ಕೂಲ್ ನ ಸಹ ಶಿಕ್ಷಕ ರಾಜೇಶ್ ಹಾಗೂ ಹಳೆ ಪೇಟೆ ಉಜಿರೆಯ ಸಿಆರ್ ಪಿ ಪ್ರತಿಮಾ ಕೆ.ಎಂ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂಗಾಡಿ ಸ.ಉ.ಪ್ರಾ. ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!