
ಮಚ್ಚಿನ: ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ “ಕನ್ನಡ ರಾಜ್ಯೋತ್ಸವ”ಆಚರಣೆ ಬಹಳ ಸಡಗರದಿಂದ ನಡೆಯಿತು.
ಕಾರ್ಯಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ರುಕ್ಮಯ್ಯ ಮೂಲ್ಯ ಹಾಗೂ ಸದಸ್ಯರಾದ ಪರಮೇಶ್ವರ್ ಭಾಗವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುಂಜಾಲಕಟ್ಟೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ಅಧಿಕಾರಿಗಳಾದ ಚೇತನಾ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರದ ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಇವರು ಕನ್ನಡ ರಾಜ್ಯೋತ್ಸವದ ಬಗ್ಗೆ ಪೂರ್ಣ ಮಾಹಿತಿ ನೀಡಿದರು. ಸಂಸ್ಥೆಯ ಕನ್ನಡ ಭಾಷಾ ಶಿಕ್ಷಕರಾದ ಅವಿನಾಶ್ ಅತಿಥಿಗಳಿಗೆ ಸ್ವಾಗತಿಸಿದರು ಮತ್ತು ಇವರ ನೇತೃತ್ವದಲ್ಲಿ ಶಾಲೆಯ ಮಕ್ಕಳು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಶಿಕ್ಷಕರಾದ ಎಸ್ ಪ್ರಕಾಶನಾಯ್ಕ ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು. ಸಂಸ್ಥೆಯ ಹಿಂದಿ ಭಾಷಾ ಶಿಕ್ಷಕರಾದ ಚಂದಪ್ಪ ಪೂಜಾರಿ ವಂದಿಸಿದರು.











