November 1, 2026
ಕೃಷಿಜಿಲ್ಲಾ ಸುದ್ದಿ

ಕರ್ನಾಟಕ ಸಾವಯವ ಕೃಷಿ ಯೋಜನೆ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೌರವ

ಬೆಳ್ತಂಗಡಿ: 2026ನೇ ಸಾಲಿನ ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಟಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯು ಈ ಬಾರಿ ಕರ್ನಾಟಕ ಸಾವಯವ ಯೋಜನೆಗೆ ದೊರಕಿದೆ. ಕರ್ನಾಟಕ ಸಾವಯವ ಕೃಷಿ ಯೋಜನೆ ರಾಜ್ಯದ ಪ್ರತಿಷ್ಠಿತ ಕೃಷಿ ಯೋಜನೆ ಆಗಿದ್ದು, ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಸೇರಿದ ಮಂಗಳೂರು ವಿಭಾಗ, ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಉತ್ತರಕನ್ನಡ ಚಿಕ್ಕಮಗಳೂರು ಜಿಲ್ಲೆ ಸೇರಿದ ಶಿವಮೊಗ್ಗ ವಿಭಾಗವಾಗಿ ಕಾರ್ಯ ನಿರ್ವಹಿಸುತ್ತಿದೆ.

ಪ್ರತಿ ವರ್ಷ ಸುಮಾರು 100ಕ್ಕೂ ಹೆಚ್ಚು ಕೃಷಿಕರ ಸಾಧನೆ ಗುರುತಿಸಿ ಅವರಿಗೆ ಜಿಲ್ಲಾಮಟ್ಟದ ಕೃಷಿ ಪ್ರಶಸ್ತಿಯನ್ನು ನೀಡುತ್ತಿರುವುದು ಸಂಸ್ಥೆಯ ವಿಶೇಷತೆಯಾಗಿದ್ದು ಪ್ರಶಸ್ತಿ ಲಭಿಸುವಲ್ಲಿ ಪ್ರಮುಖವಾಗಿದೆ.

ಸಂಸ್ಥೆಯ ಆಡಳಿತ ನಿರ್ದೇಶಕ, ಪ್ರಗತಿಪರ ಕೃಷಿಕರೂ ಆದ ಬೆಳ್ತಂಗಡಿಯ ಮೋಹನ್ ಗೌಡ ಕಲ್ಮಂಜ ಅವರು ಪ್ರಶಸ್ತಿ ಸ್ವೀಕರಿಸಿ, ಸಂಸ್ಥೆಯನ್ನು ಬೆಳೆಸಿದ ಅನ್ನದಾತ ರೈತಬಂಧುಗಳಿಗೆ, ಸಂಸ್ಥೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ವರ್ಗದವರಿಗೆ, ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿಯವರಿಗೆ, ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರಿಗೆ, ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ, ರೈತರ ಸಂಸ್ಥೆಗೆ ಗೌರವ ಸಲ್ಲಿಸಿ ಪ್ರಶಸ್ತಿ ನೀಡಿದ ಕರ್ನಾಟಕ ಸರಕಾರಕ್ಕೆ, ಬೆಳ್ತಂಗಡಿಯ ಪ್ರಮುಖ ನಾಯಕರಾದ ನಾಗೇಶ್ ಕುಮಾರ್ ಗೌಡ, ಪ್ರಶಾಂತ್ ಮಚ್ಚಿನ ಅಬ್ದುಲ್ ಕರೀಂ ಗೇರುಕಟ್ಟೆ, ನವೀನ್ ಗೌಡ ಸವಣಾಲು, ಶೇಖರ್ ಕುಕ್ಕೇಡಿ, ಎಲ್ಲಾ ರೈತ ಬಾಂಧವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ -ಉಜಿರೆಯಿಂದ ಬೆಳ್ತಂಗಡಿ ಕ್ರೀಡಾಂಗಣದವರೆಗೆ ನ್ಯಾಯದ ನಡಿಗೆ: ಬೆಳ್ತಂಗಡಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಭೆ: ಸೌಜನ್ಯ ಪರ ಹೋರಾಟಗಾರರು ಭಾಗಿ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!