November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: “ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಕರ್ನಾಟಕದ ಮಕ್ಕಳಾದ ನಮ್ಮ ಕೊಡುಗೆ ನಿರಂತರವಾಗಿರಲಿ. ಪರಿಶ್ರಮದಿಂದ ಕಲಿತ ವಿದ್ಯೆಯು ನಮ್ಮನ್ನು ಉತ್ತಮ ಹಾದಿಯಲ್ಲಿ ಮುನ್ನಡೆಸುತ್ತದೆ. ಕನ್ನಡ ನಾಡು-ನುಡಿಯ ಉಳಿವಿಗಾಗಿ ಹೋರಾಡಿದ ಮಹಾನ್ ನಾಯಕರನ್ನು ನಾವು ಎಂದೆಂದಿಗೂ ಸ್ಮರಿಸಬೇಕು” ಎಂದು ಉಜಿರೆ ಗ್ರಾಮ ಪಂಚಾಯಿತಿಯ ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಎಚ್. ಪ್ರಕಾಶ್ ಶೆಟ್ಟಿ ನೊಚ್ಚ ಹೇಳಿದರು.

ಅವರು ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾಸಿಕ ಕಾರ್ಯಚಟುವಟಿಕೆಗಳ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಇತಿಹಾಸ, ಕನ್ನಡ ಭಾಷೆಯ ಹಿನ್ನೆಲೆ ಹಾಗೂ ಅದರ ಮಹತ್ವದ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಗುಂಪುಗಾಯನ, ನೃತ್ಯ, ಕಗ್ಗ ವಾಚನ ಹಾಗೂ ಭಾಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಭಾಷಾಭಿಮಾನವನ್ನು ತಮ್ಮ ಪ್ರತಿಭೆಯ ಮೂಲಕ ಅಭಿವ್ಯಕ್ತಪಡಿಸಿದರು.

ಕಾರ್ಯಕ್ರಮದ ಅತಿಥಿಗಳ ನಿರಂತರ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಶಾಲೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ವಿದ್ಯಾರ್ಥಿನಿಯರಾದ ರಿಷಿಕಾ ಹಾಗೂ ಅನ್ವಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಧನ್ವಿ ಸ್ವಾಗತಿಸಿ, ವಿದ್ಯಾರ್ಥಿ ಪಾವನ್ ವಂದಿಸಿದರು.

Related posts

ವಿ.ಎ.ಓ ಪರೀಕ್ಷೆ : ವಿದ್ಯಾಮಾತಾದಿಂದ ಉಚಿತ ತರಬೇತಿ ಕಾರ್ಯಾಗಾರ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya
error: Content is protected !!