November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಗೋಷ್ಠಿ ಹಾಗೂ ಕನ್ನಡ ನಾಡಿನ ಹಿರಿಮೆ, ಗರಿಮೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಗೀತೆಗಳ ಗಾಯನ ನಡೆಯಿತು. ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು.

ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಮತ್ತು ನಾಡಪ್ರೇಮವನ್ನು ಬೆಳೆಸುವ ಸಂದೇಶ ನೀಡಲಾಯಿತು.

ಶಾಲಾ ಶಿಕ್ಷಕಿ ರೇಷ್ಮಾಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ತಿಳಿಸಿದರು.

ಕನ್ನಡ ನಾಡು-ನುಡಿಯ ಗೌರವವನ್ನು ಎತ್ತಿಹಿಡಿಯುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!