ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು, ವೇಣೂರು ಇಲ್ಲಿ ಕನ್ನಡ ರಾಜ್ಯೋತ್ಸವ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಗಿರೀಶ್ ಕೆ. ಎಚ್. ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು. Vannu
ಸಂಸ್ಥೆಯ ಸಂಚಾಲಕರಾದ ಅಶ್ವಿತ್ ಕುಲಾಲ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕರು ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ ನಾಯ್ಕ್ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿಯಾದ ಮಮತಾ ಶಾಂತಿ, ಶೋಭಾ ಎಲ್. ಎನ್. ಹಾಗೂ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಶಿಕ್ಷಕಿಯಾದ ಸುಚಿತ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಮನೋಜ್ ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಶಿಕ್ಷಕಿಯಾದ ಭವಾನಿ ದಿವ್ಯ ವಂದಿಸಿದರು.












