November 2, 2026
ಬೆಳ್ತಂಗಡಿ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಉಜಿರೆ ಸಿದ್ಧವನ ಗುರುಕುಲದಲ್ಲಿ ಕನ್ನಡ ರಾಜ್ಯೋತ್ಸವ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಆಶ್ರಯದಲ್ಲಿ ಸಿದ್ಧವನ ಗುರುಕುಲ ಉಜಿರೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಪ್ರಾಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಅವರು, “ಕನ್ನಡವು ಅತ್ಯಂತ ಶ್ರೀಮಂತ ಭಾಷೆಯಾಗಿದೆ. ನಮ್ಮ ನಾಡು ಪಂಪ, ಪೊನ್ನ, ರನ್ನರಂತಹ ಮಹಾನ್ ಕವಿಗಳ ಪರಂಪರೆಯನ್ನು ಹೊಂದಿದೆ. ಕನ್ನಡ ಭಾಷೆಯ ಮಹಿಮೆ ಮತ್ತು ಅದರ ಸಾವಿರಾರು ವರ್ಷಗಳ ಇತಿಹಾಸದ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು” ಎಂದು ನುಡಿದರು.

ರಾಜ್ಯೋತ್ಸವ ಸಂದೇಶ ನೀಡಿದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ವಸಂತ ಶೆಟ್ಟಿ ಅವರು, “ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿನಿತ್ಯವೂ ಕನ್ನಡದ ಬಗ್ಗೆ ಜಾಗೃತಿ ಇರಬೇಕು ಮತ್ತು ನಮ್ಮ ಕನ್ನಡತನವನ್ನು ಎಂದಿಗೂ ಬಿಡಬಾರದು. ಇಂದಿನ ವಿದ್ಯಾರ್ಥಿಗಳು ಮೊಬೈಲ್ ವ್ಯಾಮೋಹ ಬಿಟ್ಟು ಪುಸ್ತಕ ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡ ಅವರು ತುಳು ಮತ್ತು ಕನ್ನಡ ಭಾಷೆಗಳ ನಡುವಿನ ಅವಿನಾಭಾವ ಸಂಬಂಧ ಹಾಗೂ ಸಾಮರಸ್ಯದ ಕುರಿತು ಸವಿವರವಾಗಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿಗಳಾದ ರಾಜೇಶ್ವರಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು, ಕನ್ನಡ ರಾಜ್ಯೋತ್ಸವದ ಔಚಿತ್ಯ ಹಾಗೂ ಮಹತ್ವವನ್ನು ಕುರಿತು ಸವಿವರವಾದ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಗಣ್ಯರು, ಉಪನ್ಯಾಸಕರು,ಗುರುಕುಲ ವಿದ್ಯಾರ್ಥಿಗಳು,ಸಿಬ್ಬಂದಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮೂಡಿಬಂದಿತು.

ಸಿದ್ಧವನ ಗುರುಕುಲದ ಪಾಲಕರಾದ ಕೇಶವ ನಾಯ್ಕ ಅವರು ಆಗಮಿಸಿದ ಗಣ್ಯರನ್ನು ಹಾಗೂ ಸಭಿಕರನ್ನು ಸ್ವಾಗತಿಸಿದರು.
ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಸಂಕೇತ ಎಚ್.ಸಿ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಪಾಲಕರಾದ ಶಾಂತಿಸಾಗರ ಶಿರಹಟ್ಟಿ ಅವರು ವಂದನಾರ್ಪಣೆಗೈದರು.

Related posts

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya
error: Content is protected !!