ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ ಧ್ವಜಾರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಸುಧಾಕರ ಸಾಲ್ಯಾನ್ ವಹಿಸಿದ್ದರು. ಜಿ ಟಿ ಟಿ ಶಿಕ್ಷಕಿ ರತ್ನ ಕೆ ಪಿ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಅಧ್ಯಾಪಕ ವೃಂದ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಜಿ ಪಿ ಟಿ ಶಿಕ್ಷಕ ಕಿರಣ್ ಎಸ್ ಪಿ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.











