November 2, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘DECODE AI’ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು ಹಳೆಕೋಟೆ ಬೆಳ್ತಂಗಡಿಯ ಐಟಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಕೃತಕ ಬುದ್ಧಿಮತ್ತೆ ಕುರಿತ ಅರಿವು ಮೂಡಿಸುವ ಉದ್ದೇಶದಿಂದ ‘DECODE AI – Unlock the Intelligence Within’ ಎಂಬ ವಿಶೇಷ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಯತೀರಾಜ್ ಅವರು ಕೃತಕ ಬುದ್ಧಿಮತ್ತೆಯ ಬೆಳವಣಿಗೆ, ಅದರ ವಿವಿಧ ಅನ್ವಯಗಳು ಹಾಗೂ ಭವಿಷ್ಯದ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಡಿಯೋನ ಪರ್ಲ್ ಮತ್ತು ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಪೂರ್ಣೇಶ್ ಸ್ವಾಗತಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಐಟಿ ಕ್ಲಬ್ ಸಂಯೋಜಕಿ ದೀಕ್ಷಿತಾ ಅವರು ಬಹುಮಾನ ವಾಚನ ಮಾಡಿದರು. ಸಮಗ್ರ ಪ್ರಶಸ್ತಿಯನ್ನು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ. ಎನ್. ಘೋಷಿಸಿದರು.

ವಿದ್ಯಾರ್ಥಿಗಳಲ್ಲಿ ತಂತ್ರಜ್ಞಾನ ಜ್ಞಾನ, ಸೃಜನಶೀಲತೆ ಹಾಗೂ ನವೀನ ಆಲೋಚನೆಗಳನ್ನು ಬೆಳೆಸುವುದರೊಂದಿಗೆ ಕೃತಕ ಬುದ್ಧಿಮತ್ತೆಯ ಸಾಧ್ಯತೆಗಳನ್ನು ಅರಿತುಕೊಳ್ಳಲು ಈ ಕಾರ್ಯಕ್ರಮ ವೇದಿಕೆಯಾಯಿತು.

Related posts

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!