November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ ಧ್ವಜಾರೋಹಣವನ್ನು ನೆರವೇರಿಸಿ, ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ ಡಿ ಎಂ ಸಿ ಉಪಾಧ್ಯಕ್ಷ ಸುಧಾಕರ ಸಾಲ್ಯಾನ್ ವಹಿಸಿದ್ದರು‌. ಜಿ ಟಿ ಟಿ ಶಿಕ್ಷಕಿ ರತ್ನ ಕೆ ಪಿ‌ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಅಧ್ಯಾಪಕ ವೃಂದ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿದರು. ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಜಿ ಪಿ ಟಿ ಶಿಕ್ಷಕ ಕಿರಣ್ ಎಸ್ ಪಿ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.

Related posts

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಂಡಿಂಜೆ : ಮಲ್ಲಿಗೆ ಮತ್ತು ಅಣಬೆ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!