November 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಅಕ್ಬರ್‌ ಹಳೆಮನೆ ಪ್ರಥಮ

ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೆ.ಪಿ.ಎಸ್. ಪ್ರೌಢಶಾಲೆ ಪುಂಜಾಲಕಟ್ಟೆಯಲ್ಲಿ ಅ.23ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 10ನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಕ್ಷರ್ ಹಳೆಮನೆ ಅವರು “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಅತ್ಯುತ್ತಮ ವಿಚಾರ ಮಂಡನೆ ಮಾಡಿ ಈ ಸಾಧನೆ ಮಾಡಿದ್ದಾರೆ. ಸಾಧಕ ವಿದ್ಯಾರ್ಥಿಗೆ ಶಾಲೆಯ ವಿಜ್ಞಾನ ಶಿಕ್ಷಕಿ ಧನ್ಯವತಿ ಕೆ. ಮಾರ್ಗದರ್ಶನ ನೀಡಿದ್ದರು.

ವಿದ್ಯಾರ್ಥಿಯ ಈ ಸಾಧನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಶ್ಲಾಘಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ವೇಣೂರು: ಮೂಡುಕೋಡಿಯಲ್ಲಿ ಗಾಳಿ ಮಳೆಗೆ ಮನೆಗೆ ಮರ ಬಿದ್ದು ಹಾನಿ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ ರಾಜೇಶ್ ಪೂಜಾರಿ ಮೂಲಕ ಮನೆ ದುರಸ್ತಿ, ವಿದ್ಯುತ್ ಕಂಬಗಳ ಮರುಸ್ಥಾಪನೆ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!