November 2, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ವಿದ್ಯಾರ್ಥಿಯಾದ ಸಹಿಷ್ಣು ವರ್ಣ ಅವರು ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ಕನ್ನಡ ಭಾಷೆಯ ಅಭಿಮಾನ ಮತ್ತು ಮಹತ್ವದ ಕುರಿತು ಮಾತನಾಡಿದರು. ಪ್ರಪಂಚದ ಪ್ರತಿಯೊಂದು ದೇಶಕ್ಕೂ ತನ್ನದೇ ಆದ ಭಾಷೆ ಇರುವಂತೆ, ಕರ್ನಾಟಕಕ್ಕೂ ಕನ್ನಡವೇ ತನ್ನದೇ ಆದ ಭಾಷೆಯಾಗಿದೆ. ನಾವು ಕರ್ನಾಟಕದಲ್ಲಿ ವಾಸಿಸುವುದರಿಂದ ಕನ್ನಡ ಭಾಷೆಯನ್ನು ಪ್ರೀತಿಸಿ, ಗೌರವಿಸಿ, ಅಭಿಮಾನದಿಂದ ಮಾತನಾಡಬೇಕು ಎಂದು ವಿವರಿಸಿದರು. ಕನ್ನಡ ಭಾಷೆ ನಮ್ಮ ನಾಡಿನ ಹೆಮ್ಮೆ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ ಎಂಬ ಸಂದೇಶವನ್ನು ನೀಡಿದರು.

ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಾರಾದ ದೀಪಿಕಾ ನಿರೂಪಿಸಿ, ಪ್ರಣಮಿ ಸ್ವಾಗತಿಸಿ, ಹವನ ಅವರು ವಂದನಾರ್ಪಣೆ ಸಲ್ಲಿಸಿದರು.

Related posts

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!