November 3, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳಿಕೆ ಸತ್ಯಸಾಯಿ ಶಿಕ್ಷಣ ಸಂಸ್ಥೆಗಳಿಂದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಧರ್ಮಸ್ಥಳ : ಅಳಿಕೆ ಸತ್ಯಸಾಯಿ ಶಿಕ್ಷಣಸಂಸ್ಥೆಗಳ ಕಾರ್ಯದರ್ಶಿ, ಚಂದ್ರಶೇಖರ್ ಭಟ್ ನೇತೃತ್ವದಲ್ಲಿ ಶಿಕ್ಷಕರು ಮತ್ತು 36 ವಿದ್ಯಾರ್ಥಿಗಳು ನ.3ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಮಾಡಿದರು.

ಅಳಿಕೆ ಸಂಸ್ಥೆಗಳ ಕಾರ್ಯದರ್ಶಿ, ಚಂದ್ರಶೇಖರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಅಳಿಕೆಗೂ, ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದ್ದು ಅಳಿಕೆಯ ಸಂಸ್ಥೆಗಳ ಪ್ರಗತಿಗೆ ಹೆಗ್ಗಡೆಯವರ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು.

ಅಳಿಕೆಯಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಮಡಿಯಾಲ ನಾರಾಯಣ ಭಟ್ ಅವರ ಸೇವೆಯನ್ನು ಸ್ಮರಿಸಿದ ಅವರು ಇದೇ ನ.29ರಂದು ಮಡಿಯಾಲರ ಜನ್ಮಶತಮಾನೋತ್ಸವ ಸಮಾರಂಭ ಆಯೋಜಿಸಲಾಗಿದ್ದು ಅದಕ್ಕೆ ಹೆಗ್ಗಡೆಯವರನ್ನು ಆದರದಿಂದ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ|| ಹೆಗ್ಗಡೆಯವರು ಅಳಿಕೆಯಲ್ಲಿರುವ ಶಿಕ್ಷಣ ಸಂಸ್ಥೆಗಳ ಸೇವೆ, ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಮುಂದೆಯೂ ಎಲ್ಲಾ ಸಂಸ್ಥೆಗಳು ಉತ್ತರೋತ್ತರ ಪ್ರಗತಿಯನ್ನು ಸಾಧಿಸಲೆಂದು ಅವರು ಶುಭ ಹಾರೈಸಿದರು

Related posts

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ಸೌಜನ್ಯ ಪ್ರಕರಣ ಮರುತನಿಖೆ: ಇಬ್ಬರು ಎಸ್ಐಟಿ ಅಧಿಕಾರಿಗಳು ಮಂಗಳೂರಿಗೆ ಆಗಮನ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!