November 3, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ 178 ಯೋಜನೆಗಳ ಬೃಹತ್ ಪ್ರಾಜೆಕ್ಟ್ ಪ್ರದರ್ಶನ

ಮಂಗಳೂರು: ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಇನ್ನೋವೇಶನ್ ಶೋಕೇಸ್ 2026’ (Innovation Showcase 2026) ಎಂಬ ಬೃಹತ್ ಪ್ರಾಜೆಕ್ಟ್ ಪ್ರದರ್ಶನ ಶನಿವಾರ ನಡೆಯಿತು. ಇದರಲ್ಲಿ ಕಾಲೇಜಿನ ಆರು ವಿಭಾಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಸಿದ್ಧಪಡಿಸಿದ 178 ಯೋಜನೆಗಳನ್ನು ಪ್ರದರ್ಶಿಸಲಾಯಿತು.ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಇನ್ಫಾರ್ಮೇಷನ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಡಿಸೈನ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್, ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗಗಳು, ಕನರಾ ಇಂಜಿನಿಯರಿಂಗ್ ಕಾಲೇಜಿನ ‘ಐಇಇಇ’ (IEEE) ವಿದ್ಯಾರ್ಥಿ ಶಾಖೆಯ ಸಹಯೋಗದೊಂದಿಗೆ ಈ ಪ್ರದರ್ಶನವನ್ನು ಆಯೋಜಿಸಿದ್ದವು.

ಕನರಾ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಎಂ. ರಂಗನಾಥ ಭಟ್ ಉದ್ಘಾಟಿಸಿ ಶುಭ ಹಾರೈಸಿದರು.

ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡೀನ್‌ಗಳು, ವಿಭಾಗ ಮುಖ್ಯಸ್ಥರು ಮತ್ತು ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಏಳನೇ ಸೆಮಿಸ್ಟರ್ ವಿದ್ಯಾರ್ಥಿನಿ ವೈದೇಹಿ ಪೈ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಮುಖ್ಯ ಪ್ರಾಜೆಕ್ಟ್ ಸಂಯೋಜಕ ಡಾ. ವಿನಯ್ ಪಿ. ವಂದಿಸಿದರು.

ಈ ಯೋಜನೆಗಳನ್ನು ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದ ತಜ್ಞರು ಹಾಗೂ ಕಾಲೇಜಿನ ಬೋಧಕ ವರ್ಗದವರು ಮೌಲ್ಯಮಾಪನ ಮಾಡಿದರು. ಪ್ರಾಯೋಗಿಕ ಆವಿಷ್ಕಾರಗಳ ಮೂಲಕ ತಮ್ಮ ತಾಂತ್ರಿಕ ಜ್ಞಾನ, ಸೃಜನಶೀಲತೆ, ಸಂಶೋಧನಾ ಆಸಕ್ತಿ ಮತ್ತು ಸಮಸ್ಯೆ ಪರಿಹರಿಸುವ ಕೌಶಲ್ಯಗಳನ್ನು ಪ್ರದರ್ಶಿಸಲು ವಿದ್ಯಾರ್ಥಿಗಳಿಗೆ ಈ ಪ್ರದರ್ಶನವು ಉತ್ತಮ ವೇದಿಕೆಯಾಯಿತು.

Related posts

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

Suddi Udaya
error: Content is protected !!