November 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ನಾಡು, ನುಡಿ, ಸಂಸ್ಕೃತಿಯ ಅಭಿಮಾನವನ್ನು ಬಿಂಬಿಸುವ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯಿತು. ನ.2ರಂದು ‘ಕನ್ನಡ ಕಂಪು – ಕರುನಾಡಿನ ಹೆಮ್ಮೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿ ಧರ್ಮಸ್ಥಳದ ಕನ್ನಡ ಮತ್ತು ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಸಹಾಯಕ ಸಂಶೋಧಕ ಕಾರ್ತಿಕೇಶ ಕೆ. ಮಾತನಾಡಿ ಕನ್ನಡ ಭಾಷೆಯ ಹಿರಿಮೆ, ಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಕನ್ನಡಿಗರ ಅಭಿಮಾನದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ ಉದ್ದೇಶದಿಂದ ಪ್ರಬಂಧ ಸ್ಪರ್ಧೆ ಹಾಗೂ ಭಿತ್ತಿ ಪತ್ರಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರಿಗಾಗಿ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿಯನ್ನು ಬಿಂಬಿಸುವ ನೃತ್ಯ, ಗಾಯನ ಹಾಗೂ ಭಾಷಣ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮುಖ್ಯೋಪಾಧ್ಯಾಯಿನಿ ಪರಿಮಳಾ ಎಂ.ವಿ. ಸ್ವಾಗತಿಸಿ, ವಿದ್ಯಾರ್ಥಿನಿಯರಾದ ಆರುಷಿ ಪಿ ಜೋಶಿ ಅತಿಥಿಗಳನ್ನು ಪರಿಚಯಸಿದರು ಅರ್ಚನಾ ನಿರೂಪಿಸಿ, ಸಾಕ್ಷಿ ವಂದಿಸಿದರು.

Related posts

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!