November 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ.ಅ. ಸೆಕೆಂಡರಿ ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಲೈಂಗಿಕ ಅಪರಾಧಗಳ ತಡೆ ಜಾಗೃತಿ ಕಾರ್ಯಾಗಾರ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸುರಕ್ಷಿತ್ ಬಚ್ಪನ್ ಅಭಿಯಾನದಡಿ ಮಕ್ಕಳ ಸುರಕ್ಷತೆ ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕುರಿತು ಮಾಹಿತಿ ಕಾರ್ಯಾಗಾರವು ಅ.31ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ ವಕೀಲೆ ಮಮ್ತಾಜ್ ಮಕ್ಕಳ ಸುರಕ್ಷತೆ, ಹೊರಜಗತ್ತಿನಲ್ಲಿ ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆಗಳು, ಅಪಾಯಕಾರಿ ಸನ್ನಿವೇಶಗಳನ್ನು ಗುರುತಿಸುವ ವಿಧಾನ ಹಾಗೂ ಯಾವುದೇ ತೊಂದರೆ ಎದುರಾದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳು ಮತ್ತು ಅವುಗಳ ಮೂಲಕ ದೊರೆಯುವ ಪರಿಹಾರಗಳ ಬಗ್ಗೆಯೂ ತಿಳಿಸಿ, ವಿದ್ಯಾರ್ಥಿಗಳಲ್ಲಿ ಜಾಗೃತಿ ಹಾಗೂ ಆತ್ಮವಿಶ್ವಾಸವನ್ನು ಮೂಡಿಸಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿ ವಕೀಲೆ ಆರ್. ಸುಭಾಷಿಣಿ ಅವರು ಇಂದಿನ ಸಮಾಜದಲ್ಲಿ ಮಕ್ಕಳ ಸುರಕ್ಷತೆಗೆ ಎದುರಾಗುತ್ತಿರುವ ಸವಾಲುಗಳು ಹಾಗೂ ಅವುಗಳಿಂದ ರಕ್ಷಿಸಿಕೊಳ್ಳಲು ವಹಿಸಬೇಕಾದ ಎಚ್ಚರಿಕೆಗಳ ಕುರಿತು ಮಾಹಿತಿ ನೀಡಿದರು.

ವಕೀಲೆ ರಕ್ಷಿತಾ ಅವರು ಮಕ್ಕಳಿಗೆ ಎದುರಾಗಬಹುದಾದ ಅಪಾಯಗಳ ಬಗ್ಗೆ ತಿಳಿಸಿ, ಅವುಗಳನ್ನು ಧೈರ್ಯದಿಂದ ಎದುರಿಸುವ ಹಾಗೂ ಅಗತ್ಯ ಸಂದರ್ಭದಲ್ಲಿ ಸೂಕ್ತ ನೆರವು ಪಡೆಯುವ ಕುರಿತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ವಹಿಸಿದ್ದರು. ಶಿಕ್ಷಕಿಯರಾದ ಗಾಯತ್ರಿ ಸ್ವಾಗತಿಸಿದರು. ಉಷಾ ವಂದಿಸಿದರು.

Related posts

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!