ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಗೆ ಮಂಗಳೂರಿನ ಪರಾದೀಪ್ ಫಾಸ್ಫೇಟ್ ಲಿಮಿಟೆಡ್ ಮುಖ್ಯಸ್ಥರು ಮತ್ತು ಸಿಬ್ಬಂದಿ ವರ್ಗದವರು ಕರ್ನಾಟಕ ರಾಜ್ಯೋತ್ಸವ ದಿನದಂದು ಸಂಸ್ಥೆಗೆ ಭೇಟಿ ನೀಡಿ
ಸುಮಾರು 200 ಚೇರ್, 2 ಕಾಪಾಟು, 2 ಟೇಬಲ್ ಕೊಡುಗೆಯಾಗಿ ನೀಡಿದರು.
ಇವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಬಿ.ವಿಠಲ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಸೂರಾಜ್ ಶೆಟ್ಟಿ ಮತ್ತು ವೀರಮ್ಮ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದರು.













