ಬೆಳ್ತಂಗಡಿ: ಬೆಂಗಳೂರಿನಲ್ಲಿ ಅ.29ರಿಂದ 31ರವರೆಗೆ ನಡೆದ 7ನೇ ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟ 2026–27ರಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ಶ್ರೀ ಸ್ವರೂಪ್ ಎರಡು ಬೆಳ್ಳಿ ಪದಕಗಳನ್ನು ಗೆದ್ದರೆ, ವಿದ್ಯಾರ್ಥಿನಿ ಶ್ರೇಯಶ್ರೀ ಒಂದು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ
ವಿದ್ಯಾರ್ಥಿಗಳ ಈ ಸಾಧನೆಯು ಯೋಗ ಕ್ಷೇತ್ರದಲ್ಲಿನ ಅವರ ಪರಿಶ್ರಮ, ಶಿಸ್ತು ಮತ್ತು ಕ್ರೀಡಾ ಪ್ರತಿಭೆಯನ್ನು ಪ್ರತಿಬಿಂಬಿಸುವುದರ ಜೊತೆಗೆ ಸಂಸ್ಥೆಗೆ ಹೆಮ್ಮೆ ತಂದಿದೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.













