November 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಎಲ್.ಸಿ.ಆರ್. ವಿದ್ಯಾಸಂಸ್ಥೆಗೆ ಪ್ರಶಸ್ತಿಯ ಗರಿ

ಕಕ್ಯಪದವು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ದ.ಕ.ಜಿ.ಪಂ. ಹಿ.ಪ್ರಾ. ಶಾಲೆ, ದೇವಸ್ಯ ಮೂಡೂರು ಇವರ ಸಂಯುಕ್ತ ಆಶ್ರಯದಲ್ಲಿ ನ.4ರಂದು ನಡೆದ 14–17ನೇ ವಯೋಮಾನದ ವಲಯ ಮಟ್ಟದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಎಲ್.ಸಿ.ಆರ್. ಇಂಡಿಯನ್ ಸ್ಕೂಲ್, ಕಕ್ಯಪದವು ಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಬಾಲಕರ ಮತ್ತು ಬಾಲಕಿಯರ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ನಾಲ್ಕೂ ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡು ಶಾಲೆಗೆ ಕೀರ್ತಿ ತಂದಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಆಶ್ರಯದಲ್ಲಿ ಮಹಿಳಾ ಪದವಿಪೂರ್ವ ಕಾಲೇಜು, ಮೆಲ್ಕಾರು ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟ–2026ರಲ್ಲಿ ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರನ್ನರ್-ಅಪ್ ಪ್ರಶಸ್ತಿಯನ್ನು ಗಳಿಸಿದೆ.

ಒಟ್ಟು ಐದು ಟ್ರೋಫಿಗಳನ್ನು ತನ್ನದಾಗಿಸಿಕೊಂಡಿರುವ ಈ ಸಾಧನೆಯು ಎಲ್.ಸಿ.ಆರ್. ವಿದ್ಯಾಸಂಸ್ಥೆಯ ಕ್ರೀಡಾ ಕ್ಷೇತ್ರದ ಹೆಮ್ಮೆಯ ಕ್ಷಣವಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ತರಬೇತುದಾರರು ಮತ್ತು ಶಿಕ್ಷಕರ ಮಾರ್ಗದರ್ಶನ ಈ ಯಶಸ್ಸಿಗೆ ಕಾರಣವಾಗಿದೆ.

ಸಾಧನೆಗೈದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ, ಉಪನ್ಯಾಸಕರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಕಾಲೇಜು ವಿಭಾಗದ ದೈಹಿಕ ಉಪನ್ಯಾಸಕರಾದ ಪೃಥ್ವಿರಾಜ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಈ ಯಶಸ್ಸಿಗೆ ಮಾರ್ಗದರ್ಶನ ನೀಡಿದ್ದಾರೆ.

Related posts

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!