November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ: ಕಕ್ಯಪದವು ಎಲ್.ಸಿ.ಆರ್ ಇಂಡಿಯನ್ ಸ್ಕೂಲ್ ಗೆ ಪ್ರಶಸ್ತಿ

ಕಕ್ಯಪದವು: 2026-27ನೇ ಸಾಲಿನ ಉಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ಸ್ಕೂಲ್, ಕಕ್ಯಪದವು ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ.

ಈ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಕಿರಿಯ ವಿಭಾಗದಲ್ಲಿ 9 ಹಾಗೂ ಹಿರಿಯ ವಿಭಾಗದಲ್ಲಿ 7 ಸೇರಿ ಒಟ್ಟು 16 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇವರಲ್ಲಿ ಕಿರಿಯ ವಿಭಾಗದ ಇಂಗ್ಲಿಷ್ ಕಂಠಪಾಠದಲ್ಲಿ ಚಾರ್ವಿ ಎಂ.ಡಿ, ಹಿರಿಯ ವಿಭಾಗದ ಹಿಂದಿ ಕಂಠಪಾಠದಲ್ಲಿ ಹಿಬಾ ಫಾತಿಮಾ ಮತ್ತು ಕಿರಿಯ ವಿಭಾಗದ ಅಭಿನಯ ಗೀತೆಯಲ್ಲಿ ಜಾನ್ವಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು (Overall Championship) ತಮ್ಮದಾಗಿಸಿಕೊಂಡಿದೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಅವರಿಗೆ ಮಾರ್ಗದರ್ಶನ ನೀಡಿದ ಎಲ್ಲಾ ಶಿಕ್ಷಕರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು , ಮುಖ್ಯ ಶಿಕ್ಷಕಿ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿಯಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪನೆಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya
error: Content is protected !!