November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಉಜಿರೆ: ಅರಸಿನಮಕ್ಕಿಸರಕಾರಿ ಪ್ರೌಢಶಾಲೆಯಲ್ಲಿ ನ.3ರಂದು ನಡೆದ ನಿಡ್ಲೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಶುಭಾಷಣ ಸ್ಪರ್ಧೆಯಲ್ಲಿ ಶ್ರುತಾ ಆಳ್ವ ಹಾಗೂ ಮಿಮಿಕ್ರಿ ಸ್ಪರ್ಧೆಯಲ್ಲಿ ಸುಜಿತ್ ಪ್ರಥಮ ಸ್ಥಾನ ಗಳಿಸಿದರೆ, ಪ್ರಬಂಧ ಸ್ಪರ್ಧೆಯಲ್ಲಿ ಅನನ್ಯ ಜೆ. ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಶ್ರುತಾ ಆಳ್ವ, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪಾವನಿ, ಚಿತ್ರಕಲೆ ಸ್ಪರ್ಧೆಯಲ್ಲಿ ಹೃತಿಕ್ ರಾಜ್ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ., ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿ, ತಾಲೂಕು ಮಟ್ಟದ ಸ್ಪರ್ಧೆಗಳಿಗೂ ಶುಭ ಹಾರೈಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!