ಉಜಿರೆ: ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ASCA ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಲಾದ ವಾಣಿಜ್ಯ ಒಲಿಂಪಿಯಾಡ್ 2026ರಲ್ಲಿ ಕಾಲೇಜಿನ 65 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ ಬಿ. ವೈಷ್ಣವಿ ಭಟ್ ಪ್ರಥಮ ಸ್ಥಾನ, ಮಾನ್ಯಾ ರಾಜೇಶ್ ಪೈ ದ್ವಿತೀಯ ಸ್ಥಾನ ಹಾಗೂ ವಿಹಾನ್ ತೃತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂವರು ವಿದ್ಯಾರ್ಥಿಗಳು ಮುಂದಿನ ಹಂತದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಸ್ಪರ್ಧೆಯ ಸಂಯೋಜನೆಯನ್ನು ಮಾನಸ ರೈ ನಿರ್ವಹಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಅವರ ಮಾರ್ಗದರ್ಶನದಲ್ಲಿ ಹಾಗೂ ವಿಭಾಗದ ಉಪನ್ಯಾಸಕರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.














