November 4, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಆಟೋರಿಕ್ಷಾ-ಬೈಕ್ ಅಪಘಾತ: ಬೈಕ್ ಸವಾರ ಸಾವು

ವೇಣೂರು: ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ಆಟೋರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭಿಸಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ನ.3ರಂದು ಸಂಜೆ ನಡೆದಿದೆ. ಬೈಕ್ ಸವಾರ ವೇಣೂರಿನಲ್ಲಿ ಚಿನ್ನದ ಮಳಿಗೆಯ ಶಾಖಾ ವ್ಯವಸ್ಥಾಪಕನಾಗಿ ಉದ್ಯೋಗದಲ್ಲಿದ್ದ ಪೆರಾಡಿ ಗ್ರಾಮದ ಅಲೆಕ್ಕಿ ದಿ.ಕೊರಗಪ್ಪ ಕುಲಾಲ್ ಅವರು ಪುತ್ರ ಸ್ವಸ್ತಿಕ್(26) ಮೃತ ರ್ದುದೈವಿ.

ಇವರು ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆ ಕರೆದೊಯ್ಯದ್ದರು ದಾರಿ ಮಧ್ಯೆ ಅವರು ಕೊನೆ ಉಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಸ್ವಸ್ತಿಕ್ ಮನೆಯ ಆಧಾರಸ್ತಂಭವಾಗಿದ್ದು, ತಾಯಿ ಹಾಗೂ ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಬೆಸ್ಟ್ ಎಂಎಲ್ಎ ಅವಾರ್ಡ್ ಹಾಗೂ ಪರಿಮಳ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ವಿಶ್ವಬ್ರಾಹ್ಮಣ ಸಮಾಜದ ಸಂಘಟನೆಗಳ ವತಿಯಿಂದ ಅಭಿನಂದನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya
error: Content is protected !!