November 4, 2026
ಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸಾಧಕರು

ವೇಣೂರು ಪ್ರೌಢಶಾಲಾ ಶಿಕ್ಷಕ ವೆಂಕಟೇಶ್ ತುಳುಪುಳೆ ಅವರಿಗೆ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ

ವೇಣೂರು: 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ವತಿಯಿಂದ ನೀಡಲಾಗುವ 2ನೇ ವರ್ಷದ ರಾಜ್ಯಮಟ್ಟದ ‘ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ’ಗೆ ವೇಣೂರು ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ್ ತುಳುಪುಳೆ ಅವರು ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಆತ್ಮೀಯ ಒಡನಾಟ, ಮಕ್ಕಳ ಸ್ನೇಹಿ ಬೋಧನಾ ವಿಧಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನ.15ರಂದು ಪುತ್ತೂರಿನ ಮುಕ್ವೆ ಆರ್.ಜೆ.ಎಂ. ಸಭಾಂಗಣದಲ್ಲಿ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ವೆಂಕಟೇಶ್ ತುಳುಪುಳೆ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಹೋದ್ಯೋಗಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya
error: Content is protected !!