November 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿಜ್ಯ ಒಲಿಂಪಿಯಾಡ್ 2026ರಲ್ಲಿ ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ

ಉಜಿರೆ: ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ASCA ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಲಾದ ವಾಣಿಜ್ಯ ಒಲಿಂಪಿಯಾಡ್ 2026ರಲ್ಲಿ ಕಾಲೇಜಿನ 65 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಬಿ. ವೈಷ್ಣವಿ ಭಟ್ ಪ್ರಥಮ ಸ್ಥಾನ, ಮಾನ್ಯಾ ರಾಜೇಶ್ ಪೈ ದ್ವಿತೀಯ ಸ್ಥಾನ ಹಾಗೂ ವಿಹಾನ್ ತೃತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈ ಮೂವರು ವಿದ್ಯಾರ್ಥಿಗಳು ಮುಂದಿನ ಹಂತದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ಸ್ಪರ್ಧೆಯ ಸಂಯೋಜನೆಯನ್ನು ಮಾನಸ ರೈ ನಿರ್ವಹಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಬೇಬಿ ಎನ್ ಅವರ ಮಾರ್ಗದರ್ಶನದಲ್ಲಿ ಹಾಗೂ ವಿಭಾಗದ ಉಪನ್ಯಾಸಕರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.

Related posts

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಅ.8-9: ಎಸ್‌ಡಿಎಂ ಕಾಲೇಜಿನಲ್ಲಿ ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya
error: Content is protected !!