ವೇಣೂರು: 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ವತಿಯಿಂದ ನೀಡಲಾಗುವ 2ನೇ ವರ್ಷದ ರಾಜ್ಯಮಟ್ಟದ ‘ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ’ಗೆ ವೇಣೂರು ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ್ ತುಳುಪುಳೆ ಅವರು ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಆತ್ಮೀಯ ಒಡನಾಟ, ಮಕ್ಕಳ ಸ್ನೇಹಿ ಬೋಧನಾ ವಿಧಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನ.15ರಂದು ಪುತ್ತೂರಿನ ಮುಕ್ವೆ ಆರ್.ಜೆ.ಎಂ. ಸಭಾಂಗಣದಲ್ಲಿ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ವೆಂಕಟೇಶ್ ತುಳುಪುಳೆ ಅವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಹೋದ್ಯೋಗಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.













