ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ತಾಯಿ ಭುವನೇಶ್ವರಿ ದೇವಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಜೋಸೆಫ್ ರವರು ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ ಉಪಸ್ಥಿತರಿದ್ದರು. ಶಾಲೆಯ ಹಿರಿಯ ಶಿಕ್ಷಕಿ ಗೀತಾ ಕನ್ನಡ ನಾಡು-ನುಡಿ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವದ ಕುರಿತು ಮಾತನಾಡಿದರು.ವಿದ್ಯಾರ್ಥಿಗಳಿಂದ ಕನ್ನಡಾಂಬೆ ಕುರಿತಾಗಿ ನೃತ್ಯ, ಶಿಕ್ಷಕ ವೃಂದದವರಿಂದ ಗೀತ ಗಾಯನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಪ್ರದರ್ಶಿಸಲಾಯಿತು.
ಶಿಕ್ಷಕಿ ರೇವತಿ ಸ್ವಾಗತಿಸಿ, ಕೂಸಪ್ಪ ಗೌಡ ವಂದಿಸಿ, ಪರಮೇಶ್ವರ ಕಾರ್ಯಕ್ರಮ ನಿರೂಪಿಸಿದರು.













