November 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಉದ್ಯೋಗಿ ಪ್ರಮೀಳಾ ಶೆಟ್ಟಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಪ್ರಮೀಳಾ ಶೆಟ್ಟಿ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಶುಭ ಸಂದರ್ಭದಲ್ಲಿ ಅ.31ರಂದು ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ನೆರವೇರಿಸಿದರು. ಬಳಿಕ ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋ ಅವರು ಪ್ರಮೀಳಾ ಶೆಟ್ಟಿ ಅವರಿಗೆ ನೆನಪಿನ ಕಾಣಿಕೆ ನೀಡಿ, ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.

ಸಂಸ್ಥೆಯ ಮ್ಯಾನೇಜರ್ ಲ್ಯಾನ್ಸಿ ಡಿಸೋಜಾ ಅವರು ಪ್ರಮೀಳಾ ಅವರೊಂದಿಗಿನ ಒಡನಾಟ ಹಾಗೂ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಪಿಆರ್‌ಒ ಅಮೀನ ಬಿ. ಶಬಾನ ಹಾಗೂ ಹಿರಿಯ ಉದ್ಯೋಗಿ ಪವಿತ್ರ ಅವರು ಹೂಗುಚ್ಛ ನೀಡಿ ಅಭಿನಂದಿಸಿ, ಮೆಚ್ಚುಗೆಯ ಮಾತುಗಳನ್ನಾಡಿದರು. ಅರುಫಾ ಸುಹಾನ ವಂದಿಸಿದರು. ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಪಡಂಗಡಿ ಪೊಯ್ಕೆಗುಡ್ಡೆ ಶ್ರೀ ಅಯ್ಯಪ್ಪ ಭಜನಾ ಮಂದಿರ ಶಾರದೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ವೀರೇಂದ್ರ ಶೆಟ್ಟಿ, ಅಧ್ಯಕ್ಷರಾಗಿ ಸುನಿಲ್ ಕುಲಾಲ್

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya
error: Content is protected !!