November 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆಪ್ಟೆಂಬರ್ 18ನ್ನು ‘ರಾಜ್ಯ ತುಳು ದಿನ’ ಎಂದು ಘೋಷಿಸಿರುವುದು ಐತಿಹಾಸಿಕ ಹೆಜ್ಜೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ. ತುಳು ಭಾಷೆಗೆ ಆಡಳಿತಾತ್ಮಕ ಮಾನ್ಯತೆ ನೀಡಿ, ಪ್ರತಿ ವರ್ಷ ಸೆಪ್ಟೆಂಬರ್ 18ನ್ನು ರಾಜ್ಯದಾದ್ಯಂತ ‘ತುಳು ದಿನ’ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ತುಳುನಾಡು, ತುಳು ಭಾಷೆ ಹಾಗೂ ಸಮೃದ್ಧ ಸಂಸ್ಕೃತಿಯ ಸಂರಕ್ಷಣೆಯ ದಿಸೆಯಲ್ಲಿ ಕೈಗೊಂಡಿರುವ ಅತ್ಯಂತ ಐತಿಹಾಸಿಕ ಸಾಧನೆಯಾಗಿದೆ ಎಂದು ಅಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬಣ್ಣಿಸಿದ್ದಾರೆ

ಕಳೆದ ಸೆಪ್ಟೆಂಬರ್ 18 ರಂದು ತುಳುನಾಡಿನ ಹೃದಯಭಾಗವಾದ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಐತಿಹಾಸಿಕ ಹಿನ್ನೆಲೆ ಇರುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿತ್ತು. ಈಗ ಆ ಐತಿಹಾಸಿಕ ದಿನವನ್ನು ಪ್ರತಿ ವರ್ಷ ಸರ್ಕಾರಿ ಮಟ್ಟದಲ್ಲಿ ‘ತುಳು ದಿನ’ವನ್ನಾಗಿ ಆಚರಿಸಲು ಮುಂದಾಗಿರುವುದು ಸಮಗ್ರ ತುಳುನಾಡಿಗೆ ಸಿಕ್ಕ ದೊಡ್ಡ ಗೌರವವಾಗಿದೆ. ನಾಡು-ನುಡಿ ಹಾಗೂ ಭಾಷಾ ಪರಂಪರೆಯ ಉಳಿವಿಗೆ ಕಾಂಗ್ರೆಸ್ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸಿ ಒಂದುವರೆ ತಿಂಗಳು ಕಳೆದರೂ ಕೂಡ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಕೇಂದ್ರ ಸರ್ಕಾರದ ರಾಜಕೀಯ ಇಚ್ಛಾಶಕ್ತಿಯ ಕೊರತೆಯನ್ನು ಎತ್ತಿ ತೋರಿಸುತ್ತದೆ ಎಂದು ರಕ್ಷಿತ್ ಶಿವರಾಂ ಕಿಡಿಕಾರಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಸಂಸದರೆಲ್ಲರೂ ಬಿಜೆಪಿ ಪಕ್ಷದಿಂದಲೇ ಆಯ್ಕೆಯಾಗಿದ್ದರೂ, ತುಳುವರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವಲ್ಲಿ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದ್ದಾರೆ. ತುಳುನಾಡಿನ ಬಗ್ಗೆ ನಿಜವಾದ ಕಾಳಜಿ ಹಾಗೂ ಬದ್ಧತೆ ಇದ್ದರೆ, ಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಾದರೂ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಕುರಿತು ಧ್ವನಿ ಎತ್ತಬೇಕು ಎಂದು ಅವರು ಬಲವಾಗಿ ಒತ್ತಾಯಿಸಿದ್ದಾರೆ.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya
error: Content is protected !!